ಗೋಕಾಕ್: ಗೋಕಾಕ್ ನ ವಾಲ್ಮೀಕಿ ಮೈದಾನದಲ್ಲಿ ಮಂಗಳವಾರ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಪರ ಚುನಾವಣಾ ಪ್ರಚಾರಾರ್ಥ ನಡೆದ ಪ್ರಜಾಧ್ವನಿ-2 ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.
CM Siddaramaiah: ಗೋಕಾಕ್ ನ ವಾಲ್ಮೀಕಿ ಮೈದಾನದಲ್ಲಿ ಮಂಗಳವಾರ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಪರ ಚುನಾವಣಾ ಪ್ರಚಾರಾರ್ಥ ನಡೆದ ಪ್ರಜಾಧ್ವನಿ-2 ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.
ಈ ಚುನಾವಣೆಯಲ್ಲಿ ನೀವು ಕೊಡುವ ತೀರ್ಪು, ದೇಶದ ಭವಿಷ್ಯವನ್ನು ಬದಲಿಸುವ ತೀರ್ಪು. ಕೇಂದ್ರ ಕೊಟ್ಟ ಭರವಸೆಗಳಲ್ಲಿ ಎಷ್ಟು ಈಡೇರಿವೆ? ದೇಶದ ಜನರಿಗೆ ಮೋದಿ ಸರಣಿ ಸುಳ್ಳು ಗಳನ್ನು ಹೇಳುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು. ವಿದೇಶದಲ್ಲಿರುವ ಕಪ್ಪು ಹಣ ತಂದು, ಎಲ್ಲರ ಅಕೌಂಟ್ ಗೆ 15 ಲಕ್ಷ ರೂಪಾಯಿ ಹಾಕಲಾಗುವುದು ಎಂದರು. 10 ವರ್ಷ ಆದರೂ ಒಂದು ಪೈಸೆ ಬರಲಿಲ್ಲ. ವರ್ಷಕ್ಕೆ ಎರಡು ಕೋಟಿ ಉದ್ಯೋಗ ಕೊಡಲಿಲ್ಲ. ಕನಿಷ್ಟ 20 ಲಕ್ಷ ಉದ್ಯೋಗ ಕೊಡಲಿಲ್ಲ. ಬದಲಿಗೆ ನಿರುದ್ಯೋಗಿಗಳ ಸಂಖ್ಯೆ ಜಾಸ್ತಿ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.
ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಗೃಹ ಜ್ಯೋತಿ, ಗೃಹಲಕ್ಷ್ಮಿ ಶಕ್ತಿ ಯೋಜನೆಗಳಿಂದ ಮಹಿಳೆಯರಿಗೆ ಸಬಲೀಕರಣಕ್ಕೆ ಅನುಕೂಲವಾಗಿದೆ. ಕರ್ನಾಟಕ, ತೆಲಂಗಾಣದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಗೆ ಬಂದ ಮೇಲೆ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ನಂಬಿಕೆ ಬಂದಿದೆ. ಕೇಂದ್ರದಲ್ಲಿ ನಮ್ಮ ಸರ್ಕಾರ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ ಒಂದು ಕುಟುಂಬಕ್ಕೆ ಒಂದು ಲಕ್ಷ ರೂಪಾಯಿ ನೀಡಲಾಗುವುದು ಎಂದರು.
ಕಾಂಗ್ರೆಸ್ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಮೃಣಾಲ್ ಹೆಬ್ಬಾಳ್ಕರ್ ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿ ರಾಜಕೀಯ ಸುದ್ದಿ ಕರ್ನಾಟಕ ಸುದ್ದಿ CM Siddaramaiah Congress Congress Candidate Mrinal Hebbalkar Mrinal Hebbalkar Prime Minister Narendra Modi Political News In Kannada Karnataka News
Deutschland Neuesten Nachrichten, Deutschland Schlagzeilen
Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.
ಶ್ರೇಯಸ್ ಪಟೇಲ್ ಹಾಸನದಲ್ಲಿ ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ತಾರೆ: ಸಿ.ಎಂ.ಸಿದ್ದರಾಮಯ್ಯHassan : ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ತಾರೆ ಎಂದು ಸಿ.ಎಂ.ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು.
Weiterlesen »
ದೇಶ, ಸಂವಿಧಾನ, ಪ್ರಜಾಪ್ರಭುತ್ವ ಉಳಿಯಲು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು: ಸಿಎಂ ಸಿದ್ದರಾಮಯ್ಯಕಾಂಗ್ರೆಸ್ ಸರ್ಕಾರ 5 ವರ್ಷ ಪೂರ್ಣಾವಧಿ ಮುಗಿಸಿ ಕೊಟ್ಟಿರುವ ಗ್ಯಾರಂಟಿಗಳನ್ನು ಈಡೇರಿಸಲಿದೆ . ಜನ ಕಾಂಗ್ರೆಸ್ ಪರವಾಗಿದ್ದಾರೆ ಎಂದು ಗೊತ್ತಾಗಿ ಸಹಿಸದೆ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ . ಇದು ಅವರ ಭ್ರಮೆ ಎಂದು ವಿರೋಧ ಪಕ್ಷಗಳ ವಿರುದ್ಧ ಹರಿಹಾಯ್ದರು.
Weiterlesen »
ದೇಶಕ್ಕೆ ಬಿಜೆಪಿಯೇ ಡೇಂಜರ್, ಕಾಂಗ್ರೆಸ್ ಪಕ್ಷ ಅಲ್ಲ!: ಸಿಎಂ ಸಿದ್ದರಾಮಯ್ಯಬರಪರಿಹಾರಕ್ಕಾಗಿ ಮನವಿ ನೀಡಿ ಐದು ತಿಂಗಳುಗಳು ಕಳೆದರೂ ಕೇಂದ್ರ ಬಿಜೆಪಿ ಸರ್ಕಾರವು ಯಾವುದೇ ನಿರ್ಣಯ ಕೈಗೊಳ್ಳದೆ, ನ್ಯಾಯಾಲಯದ ಮೆಟ್ಟಿಲೇರುವಂತಹ ಅನಿವಾರ್ಯತೆಯನ್ನು ಸೃಷ್ಟಿಸಿತ್ತು. ಇದು ನಾಡಿನ ರೈತರಿಗೆ ಸಿಗಬೇಕಿದ್ದ ನ್ಯಾಯಯುತ ಪರಿಹಾರವನ್ನು ಕೊಡಿಸುವ ನಮ್ಮ ಹೋರಾಟಕ್ಕೆ ಸಿಕ್ಕ ಮೊದಲ ಹಂತದ ಜಯವೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
Weiterlesen »
ಕಾಂಗ್ರೆಸ್ ಎಂದೆಂದಿಗೂ ಸಂವಿಧಾನ ಹಾಗೂ ಸಾಮಾಜಿಕ ನ್ಯಾಯದ ಪರ: ಸಿಎಂ ಸಿದ್ದರಾಮಯ್ಯCM Siddaramaiah: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲಗಳನ್ನು ಪೂರ್ಣವಾಗಿ ಮನ್ನಾ ಮಾಡಲಾಗುವುದು. 25 ಲಕ್ಷದವರೆಗೆ ಆರೋಗ್ಯ ವಿಮೆ ಸೌಲಭ್ಯ ನೀಡಲಾಗುವುದು. ಸಾಮಾಜಿಕ ನ್ಯಾಯ ತರಲು ದೇಶದಾದ್ಯಂತ ಜಾತಿ ಸಮೀಕ್ಷೆಯನ್ನು ಕೈಗೊಳ್ಳಲಾಗುವುದು.
Weiterlesen »
ಬರಗಾಲ ಪರಿಹಾರ ನೀಡಿದ ಮೋದಿ ಸರ್ಕಾರ, ಕಾಂಗ್ರೆಸ್ ಸರ್ಕಾರ ತನ್ನ ಪಾಲಿನ ಡಬಲ್ ಪರಿಹಾರ ನೀಡಲಿ: ಆರ್ ಅಶೋಕ್ ಆಗ್ರಹಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಜಾನೆ ಖಾಲಿಯಾಗಿರುವುದರಿಂದ ಸಿಎಂ ಸಿದ್ದರಾಮಯ್ಯ ಸರ್ಕಾರದ ಬಳಿ ಹಣವಿಲ್ಲ ಎಂಬುದು ಜಗಜ್ಜಾಹೀರಾಗಿದೆ.
Weiterlesen »
PSI ಹಗರಣದ ಕಿಂಗ್‌ಪಿನ್ ಮನೆಯಲ್ಲಿ ಬಿಜೆಪಿ ಸಂಸದ ಉಮೇಶ್ ಜಾಧವ್ ಭರ್ಜರಿ ಭೋಜನ!PSI ಹಗರಣದ ಕಿಂಗ್‌ಪಿನ್ ಆರ್.ಡಿ.ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಭೇಟಿ ನೀಡಿರುವುದಕ್ಕೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
Weiterlesen »